Thursday, 12th December 2024

ಜಾರ್ಖಂಡ್​​​ನ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ

ರಾಂಚಿ: ಜಾರ್ಖಂಡ್​​​ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಂಚಿಯ ರಾಜಭವನದ ದರ್ಬಾರ್ ಹಾಲ್ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆದಿದ್ದು, ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮೇಲೆ ಭೂಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪವಿದ್ದು, ಅವರು ಈಗಾಗಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕಾರಣದಿಂದ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಗುರುವಾರ ಚಂಪೈ ಸೊರೇನ್ ಅವರನ್ನು ಭೇಟಿ ಮಾಡಿದ ಕೆಲವೇ ಗಂಟೆಗಳ ನಂತರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಲು ಆಹ್ವಾನ ಕೊಟ್ಟಿದ್ದರು.

ಜಾರ್ಖಂಡ್ನ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್ಜೆಡಿ ಮೈತ್ರಿಕೂಟವು 81 ಸದಸ್ಯರ ವಿಧಾನಸಭೆಯಲ್ಲಿ 47 ಶಾಸಕರನ್ನು ಹೊಂದಿದೆ. ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ 43 ಶಾಸಕರು ಚಂಪೈ ಸೊರೇನ್ ಅವರನ್ನು ಬೆಂಬಲಿಸಿದ್ದರು.