Saturday, 14th December 2024

ಟಿ20 ಸರಣಿಗೆ ಮಿಚೆಲ್ ಮಾರ್ಷ್ ನಾಯಕತ್ವ

ವೆಲ್ಲಿಂಗ್ಟನ್: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಮಿಚೆಲ್ ಮಾರ್ಷ್ ನಾಯಕತ್ವದ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ.

ಆಸ್ಟ್ರೇಲಿಯಾದ ತಂಡವನ್ನು ಹೆಸರಿಸಿದ್ದು, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಜೋಶ್ ಹೇಝಲ್‌ವುಡ್ ಅವರಂತಹ ಅನುಭವಿ ಆಟಗಾರರು ಮರಳಿದ್ದಾರೆ. ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಸ್ಟಾರ್ಕ್ ಅವರು 2022ರ ಟಿ20 ವಿಶ್ವಕಪ್‌ನಲ್ಲಿ ತವರು ನೆಲದಲ್ಲಿ ಕೊನೆಯ ದಾಗಿ ಆಡಿದ ನಂತರ ಟಿ20 ತಂಡಕ್ಕೆ ಪುನರಾಗಮಿಸಿದ್ದಾರೆ.

ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರನ್ನು ಸರಣಿಗೆ ನಾಯಕರನ್ನಾಗಿ ನೇಮಿಸಲಾಗಿದೆ. ಟೆಸ್ಟ್ ಮತ್ತು ಏಕದಿನ ಪಂದ್ಯಗಳಿಂದ ನಿವೃತ್ತರಾದ ಡೇವಿಡ್ ವಾರ್ನರ್ ಅವರು ರಾಷ್ಟ್ರೀಯ ಕರ್ತವ್ಯವನ್ನು ಪುನರಾರಂಭಿಸಲು ತಮ್ಮ 2024ರ ILT20 ಲೀಗ್‌ನಿಂದ ಹಿಂತಿರುಗಲಿದ್ದಾರೆ.

2024ರ ಟಿ20 ವಿಶ್ವಕಪ್‌ಗೆ ಮೊದಲು ಚುಟುಕು ಸ್ವರೂಪದಲ್ಲಿ ಆಸ್ಟ್ರೇಲಿಯಾದ ಕೊನೆಯ ಸರಣಿಯಾಗಿದೆ.

“ಟಿ20 ವಿಶ್ವಕಪ್‌ಗೆ ಮುನ್ನ ಐಪಿಎಲ್‌ನಲ್ಲಿ ಆಸ್ಟ್ರೇಲಿಯಾದ ಆಟಗಾರರ ಪ್ರದರ್ಶನಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ವೀಕ್ಷಿಸಲು ನಾವು ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳುತ್ತೇವೆ,” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯ ಆಯ್ಕೆಗಾರ ಜಾರ್ಜ್ ಬೈಲಿ ತಿಳಿಸಿದರು.

ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯು ಫೆ.21ರಿಂದ ಫೆ.25ರವರೆಗೆ ನಡೆಯಲಿದೆ. ವೆಲ್ಲಿಂಗ್ಟನ್ ಮತ್ತು ಆಕ್ಲೆಂಡ್‌ನಲ್ಲಿ ಪಂದ್ಯ ಗಳನ್ನು ಆಯೋಜಿಸಲಾಗುತ್ತದೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ

ಮಿಚೆಲ್ ಮಾರ್ಷ್ (ನಾಯಕ), ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇವಿಡ್ ವಾರ್ನರ್, ಆಡಮ್ ಝಂಪಾ.