Friday, 22nd November 2024

ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆ: ಡಿಕೆಶಿ ಸಂಬಂಧಿಕರಿಗೆ ’ಹೈ’ ರಿಲೀಫ್

ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಸಿಲುಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್‌ ಅವರ ಸಂಬಂಧಿಕರ ಹೇಳಿಕೆಗಳನ್ನ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪಡೆದು ಕೊಳ್ಳುವಂತೆ ಅದೇಶ ನೀಡಿದೆ. ಈ ಮೂಲಕಗೆ ದೆಹಲಿ ಹೈಕೋರ್ಟ್‌ ಕೊಂಚ ರಿಲೀಫ್ ನೀಡಿದೆ.

ಕೊರೋನಾ ಸೋಂಕು ಹಾವಳಿ ಹಿನ್ನೆಲೆಯಲ್ಲಿ ಡಿಕೆಶಿ ಸಂಬಂಧಿಕರ ಹೇಳಿಕೆಗಳನ್ನ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪಡೆದು ಕೊಳ್ಳುವಂತೆ ಜಾರಿ ನಿರ್ದೇಶನಾಲಯಕ್ಕೆ ಹೈಕೋರ್ಟ್‌ ಆದೇಶ ನೀಡಿದ್ದು, ಖುದ್ದಾಗಿ ಹೋಗಿ ಹೇಳಿಕೆ ನೀಡುವುದರಿಂದ ವಿನಾ ಯಿತಿ ನೀಡಿದೆ.

ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಅವರ ಸಂಬಂಧಿಕರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. ಸಾಕ್ಷಿಗಳಾಗಿ ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು. ಕರೊನಾ ಸೋಂಕಿನ ಭೀತಿ ಇರುವ ಹಿನ್ನೆಲೆಯಲ್ಲಿ ಖುದ್ದಾಗಿ ಹೋಗಿ ಹೇಳಿಕೆ ನೀಡುವುದರಿಂದ ವಿನಾಯಿತಿ ನೀಡುವಂತೆ ಅವರು ಕೋರಿದ್ದರು.