ಉತ್ತರಾಖಂಡ: ಹಲ್ದ್ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮದರಸಾ ಮತ್ತು ಪಕ್ಕದ ಮಸೀದಿಯನ್ನು ನೆಲಸಮಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.
ಘರ್ಷಣೆಗಳನ್ನು ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಈ ಹಿಂದೆ, ಗಲಭೆಯ ಸಮಯದಲ್ಲಿ ನಿವಾಸಿಗಳು ವಾಹನಗಳು ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಕಲ್ಲುಗಳನ್ನು ಎಸೆದ ನಂತರ ಅಧಿಕಾರಿಗಳು ಕರ್ಫ್ಯೂ ವಿಧಿಸಲಾಗಿದೆ.
ಆಸ್ಪತ್ರೆಗೆ ದಾಖಲಾದವರಲ್ಲಿ ಹೆಚ್ಚಿನವರು ಪೊಲೀಸ್ ಸಿಬ್ಬಂದಿ. ಉಳಿದವರು ಸ್ಥಳೀಯ ಮದರಸಾ ಮತ್ತು ಅದರ ಸಂಕೀರ್ಣದಲ್ಲಿರುವ ಮಸೀದಿಯನ್ನು ನೆಲಸಮಗೊಳಿಸುವಲ್ಲಿ ಭಾಗಿಯಾಗಿದ್ದ ಪುರಸಭೆಯ ಕಾರ್ಮಿಕರು ಆಗಿದ್ದಾರೆ.
ಸದ್ಯ ಪರಿಸ್ಥಿತಿ ಉತ್ತರಾಖಂಡದಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದು, ಹಿಂಸಾಚಾರವನ್ನು ನಿಯಂತ್ರಿಸುವ ಕೆಲಸದಲ್ಲಿ ಪೊಲೀಸರು ನಿರತರಾಗಿದ್ದಾರೆ. ಎಲ್ಲೆಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.