Thursday, 12th December 2024

ಅಂಡರ್-19 ಕ್ರಿಕೆಟ್ ವಿಶ್ವಕಪ್ ಫೈನಲ್‌: ನಾಳೆ ಭಾರತಕ್ಕೆ ಆಸ್ಟ್ರೇಲಿಯಾದ ಸವಾಲು

ಅಂಡರ್-19 ಕ್ರಿಕೆಟ್ ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ಸವಾಲನ್ನು ಎದುರಿಸಲಿದೆ. ಇಲ್ಲಿಯವರೆಗೆ ಭಾರತ 5 ಬಾರಿ ಅಂಡರ್-19 ಕ್ರಿಕೆಟ್ ವಿಶ್ವಕಪ್ ಗೆದ್ದಿದೆ. ಇದಲ್ಲದೇ, ಟೀಂ ಇಂಡಿಯಾ 8 ಬಾರಿ ಅಂಡರ್-19 ಕ್ರಿಕೆಟ್ ವಿಶ್ವಕಪ್ ಫೈನಲ್ ಆಡಿದೆ.

ಭಾರತ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಫೈನಲ್‌ನಲ್ಲಿ 5 ಬಾರಿ ಗೆದ್ದಿದ್ದರೆ, 3 ಬಾರಿ ಸೋಲನ್ನು ಕಂಡಿದೆ. ದಾಖಲೆಯ ಆರನೇ ಬಾರಿ ಚಾಂಪಿ ಯನ್ ಪಟ್ಟದ ಮೇಲೆ ಭಾರತ ಕಣ್ಣು ನೆಟ್ಟಿದ್ದು ಭಾನುವಾರ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲಿದೆ. ಭಾರತ ತಂಡ ಅಂಡರ್-19 ಕ್ರಿಕೆಟ್ ವಿಶ್ವಕಪ್ 2000ರಲ್ಲಿ ಮೊದಲ ಬಾರಿಗೆ ಗೆದ್ದುಕೊಂಡಿತು. ಆಗ ಭಾರತ ತಂಡದ ನಾಯಕ ಮೊಹಮ್ಮದ್ ಕೈಫ್.

ಇದರ ನಂತರ, ಟೀಮ್ ಇಂಡಿಯಾ ಅಂಡರ್-19 ಕ್ರಿಕೆಟ್ ವಿಶ್ವಕಪ್ 2006 ರ ಫೈನಲ್ ತಲುಪಿತು, ಆದರೆ ಪ್ರಶಸ್ತಿ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ವಿರಾಟ್ ಕೊಹ್ಲಿ ನಾಯಕತ್ವದ ತಂಡವು 2008 ರ ಅಂಡರ್-19 ಕ್ರಿಕೆಟ್ ವಿಶ್ವಕಪ್ ಅನ್ನು ಗೆದ್ದುಕೊಂಡಿತು.

ಬಳಿಕ ಭಾರತ ತಂಡ 2012ರಲ್ಲಿ ಮೂರನೇ ಬಾರಿ ಚಾಂಪಿಯನ್ ಆಯಿತು. ಆ ಭಾರತ ತಂಡದ ನಾಯಕ ಉನ್ಮುಕ್ತ್ ಚಂದ್. ಇಶಾನ್ ಕಿಶನ್ ನೇತೃತ್ವದ ತಂಡ ಅಂಡರ್-19 ಕ್ರಿಕೆಟ್ ವಿಶ್ವಕಪ್ ಫೈನಲ್ ತಲುಪಿದ್ದರೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ.

ಭಾರತ ತಂಡವು 2018 ರ ಅಂಡರ್-19 ಕ್ರಿಕೆಟ್ ವಿಶ್ವಕಪ್ 2018 ರಲ್ಲಿ ಫೈನಲ್ ತಲುಪಿತು. ಪೃಥ್ವಿ ಶಾ ನಾಯಕತ್ವದ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿ ಗೆಲುವು ದಾಖಲಿಸಿತು. ಈ ಮೂಲಕ ಭಾರತ ನಾಲ್ಕನೇ ಬಾರಿ ಚಾಂಪಿಯನ್ ಆಯಿತು. ಭಾರತ ತಂಡವು 2022 ರ ಅಂಡರ್-19 ಕ್ರಿಕೆಟ್ ವಿಶ್ವಕಪ್ ಅನ್ನು ಐದನೇ ಬಾರಿಗೆ ಗೆದ್ದಿದೆ. ಯಶ್ ಧುಲ್ ಈ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದರು.