Saturday, 14th December 2024

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗೆ ಕ್ಷಮಾದಾನ: ಹಂಗೇರಿ ಅಧ್ಯಕ್ಷೆ ರಾಜೀನಾಮೆ

ಬುಡಾಪೆಸ್ಟ್: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಕ್ಷಮಾದಾನ ನೀಡಿದ್ದ ಕಾರಣಕ್ಕೆ ಆಕ್ರೋಶಗೊಂಡ ಜನರು ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಹಂಗೇರಿ ಅಧ್ಯಕ್ಷೆ ಕಟಲಿನ್ ನೊವಾಕ್ ಅವರು ಶನಿವಾರ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕ್ಯಾಟಲಿನ್ ನೊವಾಕ್ ಅವರು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪರಾಧಿಯ ಶಿಕ್ಷೆಯನ್ನು ಮನ್ನಾ ಮಾಡಿದ್ದರು, ಇದನ್ನು ವಿರೋಧಿಸಿ ವಿರೋಧ ಪಕ್ಷದ ನಾಯಕರು ಅಧ್ಯಕ್ಷೀಯ ಭವನದ ಹೊರಗೆ ವಿರೋಧ ಪಕ್ಷದ ರಾಜಕಾರಣಿಗಳು ಪ್ರತಿಭಟನೆಗೆ ಇಳಿದಿದ್ದರು ಇದರಿಂದಾಗಿ ಕ್ಯಾಟಲಿನ್ ನೊವಾಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

46 ವರ್ಷದ ನೊವಾಕ್ ತನ್ನ ತಪ್ಪನ್ನು ಒಪ್ಪಿಕೊಂಡು ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಕ್ಯಾಟ್ಲಿನ್ ನೊವಾಕ್ ಹಂಗೇರಿಯ ಮೊದಲ ಮಹಿಳಾ ಅಧ್ಯಕ್ಷೆಯಾಗಿದ್ದಾರೆ. ಅವರು ಮಾರ್ಚ್ 2022 ರಲ್ಲಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.