Thursday, 2nd January 2025

ಏಕಾಂಗಿ ಸ್ಪರ್ಧೆ: ಫಾರೂಕ್ ಅಬ್ದುಲ್ಲಾ ಘೋಷಣೆ

ಶ್ರೀನಗರ : ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದೆ ನ್ಯಾಷನಲ್ ಕಾನ್ಫರೆನ್ಸ್ ತನ್ನ ಅರ್ಹತೆಯ ಆಧಾರದ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖಂಡ ಫಾರೂಕ್ ಅಬ್ದುಲ್ಲಾ ಸ್ಪಷ್ಟವಾಗಿ ಹೇಳಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನ ನ್ಯಾಷನಲ್ ಕಾನ್ಫರೆನ್ಸ್ ಘೋಷಿಸಿದ್ದು, ಇದು ಇಂಡಿಯಾ ಬಣಕ್ಕೆ ಮತ್ತೊಂದು ಹಿನ್ನಡೆಯನ್ನುಂಟು ಮಾಡಿದೆ.

ಫಾರೂಕ್ ಅಬ್ದುಲ್ಲಾ, “ಸೀಟು ಹಂಚಿಕೆಗೆ ಸಂಬಂಧಿಸಿದಂತೆ, ನ್ಯಾಷನಲ್ ಕಾನ್ಫರೆನ್ಸ್ ತನ್ನ ಸ್ವಂತ ಬಲದ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅದರ ಬಗ್ಗೆ ಎರಡು ಅಭಿಪ್ರಾಯಗಳಿಲ್ಲ. ಈ ಬಗ್ಗೆ ಇನ್ನು ಮುಂದೆ ಯಾವುದೇ ಪ್ರಶ್ನೆಗಳು ಬೇಡ” ಎಂದು ಹೇಳಿದರು.