Friday, 18th October 2024

ಸೋನಿಯಾ ಗಾಂಧಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

ವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮಂಗಳವಾರ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಮಪತ್ರ ಹಿಂಪಡೆಯಲು ಮಂಗಳವಾರ ಕೊನೆಯ ದಿನವಾಗಿತ್ತು. ಬೇರೆ ಯಾವುದೇ ಅಭ್ಯರ್ಥಿಗಳು ಸ್ಪರ್ಧಿಸದ ಕಾರಣ, ಮೂವರು ನಾಯಕರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದರು ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಜ್ಯಸಭಾ ಸದಸ್ಯರಾದ ಮನಮೋಹನ್ ಸಿಂಗ್ (ಕಾಂಗ್ರೆಸ್) ಮತ್ತು ಭೂಪೇಂದ್ರ ಯಾದವ್ (ಬಿಜೆಪಿ) ಅವರ ಅಧಿಕಾರಾವಧಿ ಏಪ್ರಿಲ್ 3 ರಂದು ಕೊನೆಗೊಳ್ಳಲಿದ್ದು, ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಅವರು ಶಾಸಕರಾಗಿ ಆಯ್ಕೆಯಾದ ನಂತರ ಡಿಸೆಂಬರ್ ನಲ್ಲಿ ಸದನಕ್ಕೆ ರಾಜೀನಾಮೆ ನೀಡಿದ ನಂತರ ಮೂರನೇ ಸ್ಥಾನ ಖಾಲಿಯಾಗಿದೆ.

200 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 115 ಮತ್ತು ಕಾಂಗ್ರೆಸ್ 70 ಸದಸ್ಯರನ್ನು ಹೊಂದಿದೆ.