Thursday, 12th December 2024

ಅಂತಿಮ ಟೆಸ್ಟ್: ತಂಡಕ್ಕೆ ಮರಳಿದ ಜಸ್ಪ್ರೀತ್ ಬುಮ್ರಾ

ವದೆಹಲಿ : ಧರ್ಮಶಾಲಾದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್’ನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ.

ರಾಂಚಿಯಲ್ಲಿ ನಡೆಯಲಿರುವ 4ನೇ ಟೆಸ್ಟ್ಗೆ ತಂಡದಿಂದ ಬಿಡುಗಡೆಯಾದ ಜಸ್ಪ್ರೀತ್ ಬುಮ್ರಾ 5ನೇ ಟೆಸ್ಟ್ಗಾಗಿ ಧರ್ಮಶಾಲಾದಲ್ಲಿ ತಂಡದೊಂದಿಗೆ ಸಂಪರ್ಕ ಸಾಧಿಸಲಿದ್ದು, ವಾಷಿಂಗ್ಟನ್ ಸುಂದರ್ ಅವರನ್ನ ತಂಡದಿಂದ ಬಿಡುಗಡೆ ಮಾಡಲಾಗಿದೆ. ಮಾರ್ಚ್ 2, 2024 ರಿಂದ ಪ್ರಾರಂಭವಾಗುವ ಮುಂಬೈ ವಿರುದ್ಧದ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯಕ್ಕಾಗಿ ತಮಿಳುನಾಡು ತಂಡವನ್ನು ಸೇರಿಕೊಳ್ಳಲಿದ್ದಾರೆ.

5ನೇ ಟೆಸ್ಟ್’ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.