Saturday, 23rd November 2024

ಮಾ.22 ರಂದು ಜೆಎನ್‍ಯು ವಿದ್ಯಾರ್ಥಿ ಸಂಘದ ಚುನಾವಣೆ

ವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‍ಯು) ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಮಾ.22 ರಂದು ನಡೆಸಲಾಗುವುದು ಮತ್ತು ಮಾ.24 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಜೆಎನ್‍ಯುಎಸ್‍ಯು) ಚುನಾವಣೆಗಳು ಕೊನೆಯದಾಗಿ 2019 ರಲ್ಲಿ ನಡೆದಿದ್ದವು.

ಚುನಾವಣೆಯ ಮೇಲ್ವಿಚಾರಣೆಯ ಜವಾಬ್ದಾರಿ ಹೊಂದಿರುವ ಜೆಎನ್‍ಯುನ ಚುನಾವಣಾ ಸಮಿತಿಯು ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ತಾತ್ಕಾಲಿಕ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾ.14 ರಿಂದ ವಿದ್ಯಾರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದು ಮತ್ತು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಾ.16 ರಂದು ಪ್ರದರ್ಶಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮಾ.20 ರಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸಭೆ ನಡೆಯಲಿದೆ. ನಂತರ ಅಭ್ಯರ್ಥಿಗಳು ಇತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅಧ್ಯಕ್ಷೀಯ ಚರ್ಚೆಯನ್ನು ನಡೆಸುತ್ತಾರೆ. ಮಾ.22 ರಂದು ಮತದಾನ ನಡೆಯಲಿದೆ. ಮತ ಎಣಿಕೆ ಮಾ.24 ರಂದು ನಡೆಯಲಿದೆ, ನಂತರ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಸೂಚನೆ ಹೊರಡಿಸಲಾಗಿದೆ.