Monday, 6th January 2025

ಕ್ಲೀವ್‌ಲ್ಯಾಂಡ್‌’ನಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು

ವಾಷಿಂಗ್ಟನ್‌: ಅಮೆರಿಕದ ಓಹಿಯೋದ ಕ್ಲೀವ್‌ಲ್ಯಾಂಡ್‌ ಎಂಬಲ್ಲಿ ಭಾರತೀಯ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ಕುರಿತು ಮಾಹಿತಿ ನೀಡಿದ್ದು, ಉಮಾ ಸತ್ಯ ಸಾಯಿ ಗಡ್ಡೆ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಉಮಾ ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿ ವಾಸವಾಗಿದ್ದಳು ಎಂದು ತಿಳಿದು ಬಂದಿದೆ.

ಈ ಮೊದಲು ಭಾರತೀಯ ವಿದ್ಯಾರ್ಥಿಗಳಾದ ಮೊಹಮ್ಮದ್‌ ಅಬ್ದುಲ್‌ ಅರಾಫತ್‌, ಹೈದರಬಾದ್‌ನ ವಿದ್ಯಾಥಿ ಸೈಯದ್‌ ವಜಾಹಿರ್‌ ಆಲಿ, ಇಂಡಿಯಾನಾದ ಪಡ್ರ್ಯೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನೀಲ್‌ ಆಚಾರ್ಯ ಸರಣಿ ಸಾವು ನಡೆದಿದ್ದು, ಅಮೇರಿಕಾದಲ್ಲಿ ಭಾರತೀಯರ ಅನುಮಾನಾಸ್ಪದ ಸಾವಿಗೆ ವಿಷಾದ ವ್ಯಕ್ತಪಡಿಸಿದೆ.

ಮೃತ ವಿದ್ಯಾರ್ಥಿ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಘೋಷಿಸಿದ ರಾಯಭಾರ ಕಚೇರಿ ಅಧಿಕಾರಿಗಳು ಮೃತ ದೇಹವನ್ನು ಭಾರತಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *