Sunday, 15th December 2024

ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ದೃಢ

ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪತ್ತೆಯಾಗಿರುವ ದೃಢವಾಗಿದೆ ಎಂದು ತಿಳಿದು ಬಂದಿದೆ.

ಆಸ್ಪತ್ರೆಗೆ ದಾಖಲಾದ 49 ಮೆಡಿಕಲ್ ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪತ್ತೆಯಾಗಿರುವ ದೃಢ ವಾಗಿದೆ.

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ 49 ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು . ತೀವ್ರ ಬೇಧಿ, ವಾಂತಿ ಮತ್ತು ನಿರ್ಜಲೀಕರಣ ಸಮಸ್ಯೆ ಯಿಂದ 49 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿದ್ದು, ಇವರಲ್ಲಿ 28 ಮಂದಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯು ತ್ತಿದ್ದರು.

ಒಂದೆಡೆ ಬರಗಾಲ, ಇನ್ನೊಂದೆಡೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ಈ ನಡುವೆ ರಾಜ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಬಿಸಿಲ ಝಳದಿಂದ ಜನರು ಹೈರಾಣಾಗುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೂ ರಣಬಿಸಿಲು ಆರಂಭವಾಗುತ್ತಿದ್ದು, ಬಿಸಿಲ ಹೊಡೆತಕ್ಕೆ ಜನರು ತತ್ತರಿಸಿ ಹೋಗು ತ್ತಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ರಾಜ್ಯದಲ್ಲಿ ಬಿಸಿಲ ಝಳ ಹೆಚ್ಚುತ್ತಿರುವುದರಿಂದ ಜನರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ರಣಬಿಸಿಲಿನಿಂದಾಗಿ ಜನರಲ್ಲಿ ಅತಿ ಸಾರ, ಡಿಹೈಡ್ರೇಷನ್, ಉಸಿರಾಟದ ಸಮಸ್ಯೆ ಸೇರಿದಂತೆ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿವೆ. ಡೆಂಘಿ, ಚಿಕನ್ ಗುನ್ಯಾ ರೋಗವು ಹೆಚ್ಚುತ್ತಿದೆ. ಕಳೆದ ಮೂರು ತಿಂಗಳಲ್ಲಿ 1663 ಡೆಂಘಿ ಪ್ರಕರಣ ಪತ್ತೆಯಾಗಿದ್ದು, ಅವುಗಳಲ್ಲಿ ಬೆಂಗಳೂರಿ ನಲ್ಲಿಯೇ 535 ಪ್ರಕರಣಗಳು ದಾಖಲಾಗಿವೆ. ಬಿಸಿಲ ಝಳ, ನೀರಿನ ಸಮಸ್ಯೆಗಳ ಜೊತೆಗೆ ಆರೋಗ್ಯ ಸಮಸ್ಯೆಗಳು ಕಾಡುತ್ತಿದ್ದು ಜನರು ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ತಿಳಿಸಿದೆ.