Sunday, 24th November 2024

ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ: ವಕೀಲ ಎಸ್‌ಜಿ ಮೆಹ್ತಾ

ನವದೆಹಲಿ: ಬರ ಪರಿಹಾರ ಕುರಿತಾದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್​ಗೆ ಬರಬೇಕಾ?” ಎಂದು ಖಾರವಾಗಿ ಪ್ರಶ್ನಿಸಿತು. ಇದಕ್ಕೆ, “ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್‌ಜಿ ಮೆಹ್ತಾ ಕೋರ್ಟ್​ ತಿಳಿಸಿದರು.
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದೆ.

ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್​ನಲ್ಲೇ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ ಎಂದು ಹೇಳಿದರು.

ಅಮಿತ್ ಶಾ, ನಿರ್ಮಲಾ ಸೀತಾರಾಮನ್​ ಮಹಾನ್ ಸುಳ್ಳುಗಾರರು. ಕರ್ನಾಟಕ ತಡವಾಗಿ ಅರ್ಜಿ ಸಲ್ಲಿಸಿತು ಎಂದು ಅಮಿತ್ ಶಾ ಹೇಳಿದರು. ಆ ವಾದವನ್ನು ಅಮಿತ್ ಶಾ ಕೋರ್ಟ್ ಮುಂದೆ ಮಂಡಿಸಬೇಕು. ಅಮಿತ್ ಶಾ ರಾಜ್ಯಕ್ಕೆ ಬಂದು ಭಾಷಣ ಮಾಡುವು ದಲ್ಲ, ಅಫಿಡವಿಟ್ ಸಲ್ಲಿಸಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ಮಾಡಿದರು.