ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಸಿದ್ಧತೆಗಳು ನಡೆದಿದ್ದು, ಇಂದಿನಿಂದ ಏ.18ರವರೆಗೆ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಏ.19 ರಂದು ಸಾರ್ವತ್ರಿಕ ಮತದಾನ ನಡೆಯಲಿದೆ.
ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿಯವರು ದೇಶದಾದ್ಯಂತ ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ನಡೆಸು ತ್ತಿದ್ದು, ನಾಳೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಮೊದಲ ಹಂತದ ಮತದಾನ ನಡೆಯಲಿರುವ ಮೈಸೂರು ಹಾಗೂ ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪನವರು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದು, ರಾಜ್ಯ ದಲ್ಲಿ ಬಿಜೆಪಿ ಪರ ವಾತಾವರಣವಿದೆ. ಈ ಬಾರಿಯೂ ಸಹ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗಳಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.