Saturday, 23rd November 2024

ಏ.೧೮ ಮತ್ತು ೧೯ರಂದು ಸಾಮಾನ್ಯ ಪ್ರವೇಶ ಪರೀಕ್ಷೆ

ತುಮಕೂರು: ಜಿಲ್ಲೆಯ ೨೫ ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ ೧೮, ೨೦೨೪ ಮತ್ತು ಏ.೧೯ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಸಕಲ ಸಿದ್ಧತೆಯನ್ನು ಕೈಗೊಳ್ಳುವಂತೆ ಜಿಲ್ಲಾಧಿ ಕಾರಿ ಶುಭ ಕಲ್ಯಾಣ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪರೀಕ್ಷಾ ಪೂರ್ವ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಪರೀಕ್ಷಾ ಕೊಠಡಿಗಳಲ್ಲಿ ಗಾಳಿ-ಬೆಳಕಿನ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳು ವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತ ೧೪೪ ಸೆಕ್ಷನ್ : ಜಿಲ್ಲೆಯಲ್ಲಿ ನಡೆಯುವ ಸಿಇಟಿ ಪರೀಕ್ಷೆಗೆ ೯ ತಂಡದ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತ ಅನಧಿಕೃತ ವ್ಯಕ್ತಿಗಳ ಹಾಗೂ ಸಾರ್ವಜನಿಕರ ನಿಷೇಧಕ್ಕೆ ಹಾಗೂ ಹತ್ತಿರದ e಼ೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀಟರ್‌ಗಳವರೆಗೆ ೧೪೪ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ಪರೀಕ್ಷಾರ್ಥಿಗಳಿಗೆ ಸೂಚನೆ: ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳ ಬೇಕು. ಪರೀಕ್ಷಾರ್ಥಿಗಳಿಗೆ ಮೊಬೈಲ್, ಒಡವೆ, ಗಡಿಯಾರ, ಶೂ ಹಾಗೂ ಇನ್ನಿತರೇ ಎಲೆಕ್ಟಾçನಿಕ್ ವಸ್ತುಗಳನ್ನು ನಿಷೇಧಿಸಿರುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರವೇಶಪತ್ರದಲ್ಲಿ ನೀಡಬೇಕೆಂದು ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಗಂಗಾಧರ್ ಮಾತನಾಡಿ, ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ ೧೭ ಪರೀಕ್ಷಾ ಕೇಂದ್ರಗಳು, ತಿಪಟೂರು-೩, ಮಧುಗಿರಿ-೨, ಶಿರಾ-೨ ಹಾಗೂ ಕುಣ ಗಲ್ ತಾಲ್ಲೂಕಿನಲ್ಲಿ ೧ ಸೇರಿದಂತೆ ಒಟ್ಟು ೨೫ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ತುಮಕೂರು ತಾಲ್ಲೂಕಿನಲ್ಲಿ ೬೬೪೦ ವಿದ್ಯಾರ್ಥಿಗಳು, ತಿಪಟೂರು-೧೯೪೮, ಮಧುಗಿರಿ -೧೧೯೨, ಶಿರಾ-೧೨೨೧ ಹಾಗೂ ಕುಣ ಗಲ್ ತಾಲ್ಲೂಕಿನಲ್ಲಿ ೫೦೦ ಸೇರಿದಂತೆ ಒಟ್ಟು ೧೧೫೦೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯ ಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಸೇರಿದಂತೆ ಮತ್ತಿತರರು ಹಾಜರಿದ್ದರು.