ತುಮಕೂರು: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿ ಪ್ರಕಾರ, ಪ್ರತಿ ಮಾಹೆ 2500 ರೂ.ಗಳ ಶಿಷ್ಯ ವೇತನ ಹಾಗೂ ಹಣ ಪಾವತಿಸುವ ಆಧಾರದ ಮೇರೆಗೆ ವಸತಿ ನಿಲಯದ ಸೌಲಭ್ಯ ಕಲ್ಪಿಸಲಾಗುವುದು.
ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಆಂಗ್ಲ ಭಾಷೆಯನ್ನು ಒಂದು ವಿಷಯವನ್ನಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, 2024ರ ಜುಲೈ 1ಕ್ಕೆ ಅನ್ವಯಿಸುವಂತೆ 15 ರಿಂದ 23 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಹಾಗೂ 15 ರಿಂದ 25 ವರ್ಷ ವಯೋಮಿತಿಯೊಳಗಿನ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಆಸಕ್ತ ಅಭ್ಯರ್ಥಿಗಳು ಜಾಲತಾಣ hಣಣಠಿs://ಞhಣigಚಿಜಚಿg.ಚಿಛಿ.iಟಿ/ಂ ಜmissioಟಿ ಈoಡಿm.ಠಿಜಜಿ ಮೂಲಕ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮೇ 31ರೊಳಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-582102 ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ತುಮಕೂರು (ದೂ.ವಾ.ಸಂ. 0816-2275370) ಅಥವಾ ಪ್ರಾಂಶುಪಾಲರು ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಗದಗ ಬೆಟಗೇರಿ (ದೂ.ವಾ.ಸಂ. 08372-297221) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.