Monday, 25th November 2024

ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್‌ಗೆ ಮತ ಹಾಕಿ: ಶಶಿಧರ್ ಪೂಜಾರ್

ಹರಪನಹಳ್ಳಿ: ದೇಶದಲ್ಲಿ ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಸಂವಿಧಾನದ ಉಳಿವಿಗಾಗಿ ಎಂದು ಕಾಂಗ್ರೆಸ್ ಮುಖಂಡ ಶಶಿಧರ್ ಪೂಜಾರ್ ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಮನೆ ಮನೆಗಳಿಗೆ ತೆರಳಿ ದಾವಣಗರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಅವರ ಪರ ಮತಯಾಚನೆ ಮಾಡಿದ ಬಳಿಕ ಮಾತನಾಡಿದ ಅವರು ದೇಶಲ್ಲಿ ಸಮಾಜಿಕ ನ್ಯಾಯ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಬೇಕು ಎಂದರು.

ಈ ಚುನಾವಣೆ ಅತ್ಯಂತ ಮಹತ್ವ ಪೂರ್ಣವಾದದ್ದು, ನಿಮ್ಮ ಒಂದೊAದು ಮತವೂ ಅತ್ಯಮೂಲ್ಯ. ಸಂವಿಧಾನವನ್ನು ಬದಲಾಯಿಸಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮತದಾರರು ತಕ್ಕ ಪಾಠ ಕಲಿಸಬೇಕಿದ್ದು ಸಮಾನತೆ ಸಾರುವ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ವನ್ನು ಉಳಿಸಬೇಕು ಎಂದು ಹೇಳಿದರು.

ಬಿಜೆಪಿ ರಾಜ್ಯದಲ್ಲಿ ಎಂದು ಬಹುಮತ ಪಡೆದು ಅಧಿಕಾರ ಮಾಡಿಲ್ಲ ಬರೀ ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿದಿದೆ. ಈ ಭಾರಿ ಮಹಿಳೆಯರಿಗೆ ಹೆಚ್ಚು ಟಿಕೆಟ್ ಕೊಟ್ಟ ಪಕ್ಷ ಕಾಂಗ್ರೆಸ್, ನುಡಿದಂತೆ ನಡೆದಿದೆ ಮುಂದೆಯೂ ನಡೆದುಕೊಳ್ಳತ್ತದೆ ಎಂದರು.

ಸತ್ಯ ಮತ್ತು ಸುಳ್ಳಿನ ನಡುವೆ ನಡೆಯುತ್ತಿರುವ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಸುಳ್ಳಿನ ಗುತ್ತಿಗೆಯನ್ನು ಪಡೆದು ಕೊಂಡಿದ್ದಾರೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟ ಕೊಡುಗೆ ರಾಜಕೀಯ ಮೀಸಲಾತಿ, ಬಿಜೆಪಿ ಅಧಿಕಾರ ಹಿಡಿದಿದ್ದೇ ಆದರೆ ಸಂವಿಧಾನವನ್ನು ಬದಲಿಸುವ ಷಡ್ಯಂತ್ರ ನಡೆಯುತ್ತಿದೆ. ಸತ್ಯ ಗೆಲ್ಲಲು ಕಾಂಗ್ರೆಸ್ ಗೆಲ್ಲಿಸಿ ಎಂದರು.

ಸರ್ವರಿಗೂ ಸಮಬಾಳು ಸಮಪಾಲ ಅಂದರೆ ಅದು ಕಾಂಗ್ರೆಸ್ ಪಕ್ಷ, ಬಿಜೆಪಿ ಅವರು ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವನ್ನು ಬದಲಾವಣೆ ಮಾಡಲು ಹೊರಟಿರುವ ನೀಚರು ಇವರನ್ನು ಮನೆಗೆ ಕಳುಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಜಾಕೀರ್ ಹುಸೇನ್ ಸರ್ಖಾವಾಸ್, ಮುಖಂಡರಾದ ಬೇಲೂರು ಅಂಜಪ್ಪ, ಹುಲಿಕಟ್ಟಿ ಚಂದ್ರಪ್ಪ, ಎಲ್.ತಿಮ್ಮಾನಾಯ್ಕ್, ಬಡಿಗಿ ರಹಮತುಲ್ಲಾ, ರಿಯಾಜ್ ಸೇರಿದಂತೆ ಮತ್ತಿತರರು ಇದ್ದರು.