Monday, 25th November 2024

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಧರಣಿ

ಚಿಕ್ಕಬಳ್ಳಾಪುರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಇಬ್ಬರು ಪೊಲೀಸ್ ಪೇದೆಗಳು ತಮ್ಮ ಕುಟುಂಬ ಸಮೇತ ಧರಣಿ ನಡೆಸುತ್ತಿದ್ದಾರೆ.

ತಮ್ಮನ್ನು ಪೊಲೀಸ್ ವರಿಷ್ಟಾಧಿಕಾರಿಗಳು ನಮ್ಮದ್ದಲ್ಲದ ತಪ್ಪಿಗೆ ನಮ್ಮನ್ನು ಸೇವೆಯಿಂದ ಅಮಾನತ್ತು ಮಾಡಿದ್ದಾರೆ. ನಮಗೆ ಪೊಲೀಸ್ ವರಿಷ್ಟಾಧಿಕಾರಿ ಗಳಿಂದ ಕಿರುಕುಳ ಆನ್ಯಾಯ ಆಗಿದೆ ಎಂದು ಆರೋಪಿಸಿ ಅಂಬೇಡ್ಕರ್ ಭಾವಚಿತ್ರ ಹಿಡಿದು ಧರಣಿ ನಡೆಸುತ್ತಿದ್ದಾರೆ.

ಅಮಾನತ್ತು ಮಾಡಿ ಆರು ತಿಂಗಳು ಕಳೆದಿದೆ. ಅಮಾನತ್ತು ಆದೇಶ ಹಿಂಪಡೆದಿಲ್ಲ. ನಮ್ಮ ಮೇಲಿನ ಆರೋಪ ಬಗ್ಗೆ‌ ನಿಷ್ಪಕ್ಷಪಾತವಾಗಿ ತನಿಖೆ ನಡೆಸ ಬೇಕೆಂದು ಪೊಲೀಸ್ ಕಾನ್ಸ್ ಟೇಬಲ್ ಗಳು ಧರಣಿ ಕೂತಿದ್ದಾರೆ.

ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಿ.ಎಲ್.ನಾಗೇಶ್, ಧರಣಿ ಮಾಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು. ಏನಾದರೂ ಅವರ ಅಹವಾಲು ಇದ್ದರೆ ಇಲಾಖೆಗೆ ಸಲ್ಲಿಸಲಿ. ಅಥವ ನನ್ನ ಮೇಲಿನ ಅಧಿಕಾರಿಗಳಿಗೆ ಕೊಡಲಿ ನಿಯಮನುಸಾರ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ ಎಂದರು. ಅದು ಬಿಟ್ಟು ಈ ರೀತಿ ಪ್ರತಿಭಟನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.