Thursday, 12th December 2024

ಭೀಕರ ರಸ್ತೆ ಅಪಘಾತ: ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

ಚಿಕ್ಕೋಡಿ; ಬೆಳಗಾವಿ ಜಿಲ್ಲೆ ಚಿಕ್ಕೋಡಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಈ ದುರ್ಘಟನೆ ನಡೆದಿದೆ. ಅಥಣಿ ತಾಲ್ಲೂಕಿನ ಬಳ್ಳಿಗೇರಿ ಗ್ರಾಮದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..

ಬಳ್ಳಿಗೇರಿ ಗ್ರಾಮದ ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತ ಮಹಿಳೆಯರು. ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭ ಕ್ರೂಸರ್ ವಾಹನ ಪಲ್ಟಿಯಾಗಿ ಈ ದುರ್ಘಟನೆ ನಡೆದಿದೆ.

ಕ್ರೂಸರ್ ವಾಹನದ ಎಡಬದಿಯ ಟೈರ್ ಬ್ಲ್ಯಾಸ್ಟ್ ಆಗಿದ್ದರಿಂದ ಈ ಅನಾಹುತ ನಡೆದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಹಲವರಿಗೆ ಗಂಭೀರ ವಾದ ಗಾಯಗಳಾಗಿವೆ..