Monday, 6th January 2025

ನಟಿ ಪವಿತ್ರಾ ಜಯರಾಂ ದುರಂತ ಸಾವು

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲು ಸಮೀಪಕಿರುತೆರೆ ನಟಿ ಪವಿತ್ರಾ ಜಯರಾಂ ಅಪಘಾತದಲ್ಲಿ ದುರಂತ ಸಾವು ಕಂಡಿದ್ದಾರೆ.  ಅಪಘಾತ ಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್ ಸಮೀಪ ನಡೆದ ಕಾರು ಅಪಘಾತದಲ್ಲಿ ನಟಿ ಪವಿತ್ರಾ ಸ್ಥಳದಲ್ಲೇ ಮರಣ ಹೊಂದಿದ್ದಾರೆ. ಪವಿತ್ರ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆ ಯವರು. ಇಬ್ಬರು ಮಕ್ಕಳು ಇದ್ದಾರೆ. ಕನ್ನಡದ ರೋಬೋ ಫ್ಯಾಮಿಲಿ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ನಟಿ ಪವಿತ್ರಾ ಅವರು ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದರು.

Leave a Reply

Your email address will not be published. Required fields are marked *