ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಎಂ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್ ತಮ್ಮ ಎಫ್‌ಐಆರ್‌ನಲ್ಲಿ ಆರೋಪಿಸಿದ್ದರು. ಈ ಘಟನೆ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಕೇಜ್ರಿವಾಲ್ ಅವರ ಮೌನವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಅವರು ದಾಳಿಯ ಸಮಯದಲ್ಲಿ ಸ್ಪಷ್ಟವಾಗಿ ನಿಷ್ಕ್ರಿಯರಾಗಿದ್ದುದಕ್ಕಾಗಿ ಕೇಜ್ರಿವಾಲ್ ಅವರನ್ನು ‘ಮುಖ್ಯ ಅಪರಾಧಿ’ ಎಂದು ಕರೆದಿದ್ದಾರೆ.
ನನ್ನನ್ನು ರಕ್ಷಿಸಿಕೊಳ್ಳಲೆಂದು ನಾನು ಅವನನ್ನು ನನ್ನ ಕಾಲುಗಳಿಂದ ದೂರ ತಳ್ಳಿದೆ. ಆ ಸಮಯದಲ್ಲಿ ಆತ ನನ್ನ ಮೇಲೆ ಎರಗಿ ಕ್ರೂರವಾಗಿ ಎಳೆದು ಕೊಂಡು ಮತ್ತು ಉದ್ದೇಶಪೂರ್ವಕವಾಗಿ ನನ್ನ ಅಂಗಿಯನ್ನು ಮೇಲಕ್ಕೆ ಎಳೆದ’ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ‘ಬಿಭವ್ ಕುಮಾರ್ ಪಶ್ಚಾತ್ತಾಪ ಪಟ್ಟಿಲ್ಲ. ನನ್ನ ಎದೆ, ಹೊಟ್ಟೆ ಮತ್ತು ಸೊಂಟದ ಪ್ರದೇಶಕ್ಕೆ ತನ್ನ ಕಾಲುಗಳಿಂದ ಒದೆಯುವ ಮೂಲಕ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ’ ಎಂದು ಸ್ವಾತಿ ದೂರಿದ್ದಾರೆ.
ಸ್ವಾತಿ ಮಾಲಿವಾಲ್ ಆರೋಪ ಸುಳ್ಳು ಎಂದು ಆಪ್ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.