ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಳೆ ಒಂದು ವರ್ಷವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ಒಂದು ವರ್ಷದ ಸಂಭ್ರಮಾಚರಣೆಗೆ ಲೋಕಸಭಾ ಚುನಾವಣೆ ನೀತಿ ಸಂಹಿತಿ ಅಡ್ಡಿಯಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಸುದ್ದಿಗೋಷ್ಠಿ ನಡೆಸಿ ಒಂದು ವರ್ಷದಲ್ಲಿ ಏನೆಲ್ಲಾ ಮಾಡಿದ್ದಾರೆ ಎನ್ನುವುದನ್ನು ಜನತೆ ಮುಂದೆ ಬಿಚ್ಚಿಡಲಿದ್ದಾರೆ. ಮತ್ತೊಂದೆಡೆ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ. ಒಂದು ವರ್ಷದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟು ಪ್ರತಿಭಟನೆಗೆ ತೀರ್ಮಾನಿಸಿದೆ.
ಕಳೆದ ವರ್ಷ 2023, ಮೇ ತಿಂಗಳ ಸಮಯ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಅಂತರಗಳಿಂದ ಬಹುಮತಗಳಿಂದ ಗೆದ್ದು ಸರ್ಕಾರ ರಚಿಸಿತ್ತು. ಮೇ 20ರಂದು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ, ಡಿ ಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದೀಗ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ ಮನೆ ಮಾಡಿದೆ.