ಬೆಂಗಳೂರು: ಕಮಲ್ ಹಾಸನ್ ಮತ್ತು ನಿರ್ದೇಶಕ ಶಂಕರ್ ಅವರ ‘ಇಂಡಿಯನ್ 2’ ಜುಲೈ 12 ರಂದು ಮೂರು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಅನಿರುದ್ಧ್ ರವಿಚಂದರ್ ಸಂಯೋಜಿಸಿದ ಮೊದಲ ಸಿಂಗಲ್ ಮೇ 22 ರಂದು ಬಿಡುಗಡೆಯಾಗಲಿದೆ.
ಇಂಡಿಯನ್ʼ ಸೀಕ್ವೆಲ್ಗೆ ಕಾಲಿವುಡ್ನ ನಿರ್ದೇಶಕ ಎಸ್.ಶಂಕರ್ ಆಯಕ್ಷನ್ ಕಟ್ ಹೇಳಿರುವುದು ನಿರೀಕ್ಷೆ ಹೆಚ್ಚಲು ಕಾರಣ. ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಕಾಜಲ್ ಅಗರ್ವಾಲ್, ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೋವರ್, ವಿವೇಕ್, ಸಮುದ್ರ ಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ. ಕಮಲ್ ಹಾಸನ್ ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.
ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದೆ.
1996ರಲ್ಲಿ ತೆರೆಕಂಡ ಎಸ್.ಶಂಕರ್ ನಿರ್ದೇಶನದ ʼಇಂಡಿಯನ್ʼ ತಮಿಳು ಚಿತ್ರದಲ್ಲಿ ಕಮಲ್ ಹಾಸನ್ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್, ಸುಕನ್ಯಾ, ಮನೋರಮಾ, ನಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಹೊಂದಿದ್ದ ಈ ಸಿನಿಮಾದಲ್ಲಿಯೂ ಕಮಲ್ ಹಾಸನ್ ದ್ವಿಪಾತ್ರ ನಿಭಾಯಿಸಿದ್ದರು.
ಭಾರತದ ಕ್ಲಾಸಿಕ್ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸ ಲಾಗಿತ್ತು. ಮಾತ್ರವಲ್ಲ ಕಮಲ್ ಹಾಸನ್ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್.ರೆಹಮಾನ್ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.