Friday, 22nd November 2024

ಮೇ 30 ರಂದು ಹಾಸನದೆಡೆಗೆ ನಮ್ಮ ನಡಿಗೆ

ಹಾಸನ: ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣವನ್ನು ಖಂಡಿಸಿ ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟವು ಮೇ 30 ರಂದು ಹಾಸನದೆಡೆಗೆ ನಮ್ಮ ನಡಿಗೆ ಎಂಬ ಹೆಸರಿನಲ್ಲಿ ಹಾಸನ ಚಲೋಗೆ ಕರೆ ನೀಡಿದ್ದಾರೆ.

ಮಂಗಳವಾರ ಬೆಂಗಳೂರಿನ ಪ್ರೆಸ್‌ ಕ್ಲಬ್‌ ನಲ್ಲಿ ವಿವರಣೆ ನೀಡಿದ ಸಂಘಟನೆಯ ಪದಾಧಿಕಾರಿಗಳು ಮಾನವ ಹಕ್ಕುಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಎಲ್ಲಾ ಸಂಘಟನೆಗಳು ಹಾಗೂ ವ್ಯಕ್ತಿಗಳು ಬೆಂಬಲ ಸೂಚಿಸಲಿದ್ದಾರೆ ಎಂದರು.

ಹಾಸನ ಚಲೋ ಕಾಲ್ನಡಿಗೆಯ ಮೆರವಣಿಗೆಯಲ್ಲಿ ಮಹಿಳೆಯರು, ದಲಿತರು, ಕಾರ್ಮಿಕರು, ರೈತರು, ವಿದ್ಯಾರ್ಥಿಗಳು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಆದಿವಾಸಿ ಸಂಘಟನೆಗಳ ಪ್ರತಿನಿಧಿಗಳು ಮತ್ತು ಚಿಂತಕರು, ಬರಹಗಾರರು, ಕಲಾವಿದರೂ ಸಹ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರು ಹೇಳಿದ್ದಾರೆ.

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆಯರಿಗೆ ನೈತಿಕ ಸ್ಥೈರ್ಯ ತುಂಬುವುದು ಈ ಅಭಿಯಾನದ ಉದ್ದೇಶವಾಗಿದ್ದು, ಪ್ರಜ್ವಲ್‌ ಬಂಧನಕ್ಕೆ ಒತ್ತಾಯಿಸಲಿದ್ದೇವೆ ಎಂದು ಆಯೋಜಕರು ಹೇಳಿದ್ದಾರೆ.