ಗುಜರಾತ್: ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಮೂವರು ಮೃತಪಟ್ಟು, 30 ಮಂದಿ ಗಾಯಗೊಂಡಿರುವ ಘಟನೆ ಗುಜರಾತ್ ನಲ್ಲಿ ಶನಿವಾರ ಸಂಭವಿಸಿದೆ.
ಸಕರಿಯಾ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮಾಲ್‌ಪುರದಿಂದ ಬರುತ್ತಿದ್ದ ರಾಜ್ಯ ಸಾರಿಗೆ ಬಸ್ ಡಿವೈಡರ್ ಹಾರಿ ಮೊಡಸಾದಿಂದ ವಿರುದ್ಧ ಧಿಕ್ಕಿನಲ್ಲಿ ಮಾಲ್‌ಪುರಕ್ಕೆ ತೆರಳುತ್ತಿದ್ದ ಮತ್ತೊಂದು ಬಸ್‌ಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಮೃತಪಟ್ಟಿದ್ದಾರೆ.
ಮೃತರ ಗುರುತು ಪರಿಚಯದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಘಟನೆಯಲ್ಲಿ 30 ಮಂದಿಗೆ ಗಾಯಗಳಾಗಿದೆ. ಸ್ಥಳೀಯರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.