ನವದೆಹಲಿ: ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ಆಹ್ವಾನಿಸಲಾಗಿದೆ.
ಜೂ.9 ರಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಸೇರಿದಂತೆ ವಿದೇಶಿ ನಾಯಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಮತ್ತು ಭೂತಾನ್ ರಾಜ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಅವರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಇತ್ತೀಚೆಗೆ ಪ್ರಕಟವಾದ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಎನ್‌ಡಿಎ 293 ಸ್ಥಾನಗಳನ್ನು ಗೆದ್ದಿದೆ. ಅದೇ ರೀತಿ ನರೇಂದ್ರ ಮೋದಿಯವರ ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಸಲಿದ್ದಾರೆ.