ನವದೆಹಲಿ: ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮುಂಚಿತವಾಗಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಶನಿವಾರ ನವದೆಹಲಿಗೆ ಆಗಮಿಸಿದರು.
ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಬಹುಮತ ಗಳಿಸಿದ ನಂತರ ಅವರು ದಾಖಲೆಯ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಲಿದ್ದಾರೆ. ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಹಸೀನಾ ಶನಿವಾರ ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದಲ್ಲಿ ಢಾಕಾದಿಂದ ಹೊರಟರು ಮತ್ತು ಜೂ. 9 ರ ಮಧ್ಯಾಹ್ನದವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಉಳಿಯಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹೊರತಾಗಿ ಉಭಯ ನಾಯಕರು ಮಹತ್ವದ ಸಭೆ ನಡೆಸುವ ನಿರೀಕ್ಷೆಯಿದೆ ಎಂದು ಬಾಂಗ್ಲಾದೇಶ ಹೈಕಮಿಷನ್ ಪತ್ರಿಕಾ ಸಚಿವ ಶಬಾನ್ ಮಹಮೂದ್ ತಿಳಿಸಿದ್ದಾರೆ.