ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದ್ದು, ಎರಡು ವಿಮಾನಗಳು ಪರಸ್ಪರ ಢಿಕ್ಕಿಯಾಗುವುದು ತಪ್ಪಿದೆ.
ಮುಂಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಏಕಕಾಲದಲ್ಲಿ 2 ವಿಮಾನಗಳ ಭೂಸ್ಪರ್ಶ, ಟೇಕಾಫ್ ಆಗಿದೆ.
ಕೆಲವೇ ಮಿಲಿ ಸೆಕೆಂಡ್ ಗಳ ಅಂತರದಲ್ಲಿ ಎರಡೂ ವಿಮಾನಗಳ ಢಿಕ್ಕಿ ತಪ್ಪಿದೆ.
ಏರ್ ಇಂಡಿಯಾ ಜೆಟ್ ಟೇಕಾಫ್ ಆಗುತ್ತಿದ್ದ ಅದೇ ರನ್ ವೇ ಮೇಲೆ ಇಂಡಿಗೋ ವಿಮಾನವೊಂದು ಭೂಸ್ಪರ್ಶ ಮಾಡಿದ್ದು, ಈ ಸಂದರ್ಭದಲ್ಲಿ ಎರಡೂ ವಿಮಾನಗಳಲ್ಲಿ ನೂರಾರು ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ. ಕೆಲವೇ ಸೆಕಂಡ್ ಗಳ ಅಂತರವಿದ್ದ ಕಾರಣ ಉಭಯ ವಿಮಾನಗಳಲ್ಲಿನ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಇನ್ನು ಪ್ರಕರಣವನ್ನುಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ಸಂಸ್ಥೆ ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದೆ. ಅಂತೆಯೇ ಈ ವೇಳೆ ಕರ್ತವ್ಯದಲ್ಲಿದ್ದ ಏರ್ ಟ್ರಾಫಿಕ್ ಕಂಟ್ರೋಲ್ ಅಧಿಕಾರಿಯನ್ನು ಪದಚ್ಯುತಗೊಳಿಸಿದೆ.