Friday, 13th December 2024

ಪುರಿ ಜಗನ್ನಾಥ ದೇವಾಲಯದ ನಾಲ್ಕು ದ್ವಾರ ತೆರೆಯಲು ಅನುಮತಿ

ಪುರಿ: ಬಿಜೆಪಿ ಗೆದ್ದು ಅಧಿಕಾರಕ್ಕೆ ಬರುತ್ತಿದ್ದಂತೇ ಒಡಿಶಾದಲ್ಲಿರುವ ಪುರಿ ಜಗನ್ನಾಥ ದೇವಾಲಯದ ನಾಲ್ಕು ದ್ವಾರಗಳನ್ನು ಭಕ್ತರಿಗಾಗಿ ತೆರೆಯಲು ಅನುಮತಿ ನೀಡಲಾಗಿದೆ.
ಒಡಿಯಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಅವರು ಅನುಮೋದನೆ ನೀಡಲಾಗಿದೆ. ಅಧಿಕಾರ ಸ್ವೀಕರಿಸಿದ ತಕ್ಷಣವೇ ಮಾಝಿ ಗುರುವಾರದಿಂದಲೇ ಪುರಿಯ ನಾಲ್ಕು ದ್ವಾರಗಳನ್ನು ಭಕ್ತರಿಗಾಗಿ ತೆರೆಯಲು ಆದೇಶ ನೀಡಿದ್ದಾರೆ.

ಅಲ್ಲದೆ ದೇವಸ್ಥಾನದ ಅಭಿವೃದ್ಧಿಗಾಗಿ 500 ಕೋಟಿ ರೂ.ಗಳ ಅನುದಾನವನ್ನೂ ಘೋಷಿಸಿದ್ದಾರೆ. ಇದಕ್ಕಾಗಿ ಇಲ್ಲಿನ ಸಂಸದ ಸಂಬಿತ್ ಪಾತ್ರಾ ಮತ್ತು ನೂತನ ಸಚಿವರ ತಂಡ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುರಿ ದೇವಾಲಯದ ನಾಲ್ಕು ದ್ವಾರಗಳನ್ನು ತೆರೆಯುವ ಬಗ್ಗೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು.

ಇಲ್ಲಿವರೆಗೆ ದೇವಾಲಯಕ್ಕೆ ಭಕ್ತರಿಗೆ ಒಂದು ದ್ವಾರದ ಮೂಲಕ ಮಾತ್ರ ಪ್ರವೇಶ ಕಲ್ಪಿಸಲಾಯಿತು. ಕೋವಿಡ್ ಸಂದರ್ಭದಲ್ಲಿ ಅಂದಿನ ನವೀನ್ ಪಾಟ್ಯಾಯಕ್ ನೇತೃತ್ವದ ಸರ್ಕಾರ ಉಳಿದ ಗೇಟ್ ಗಳನ್ನು ಮುಚ್ಚಿತ್ತು.