Friday, 25th October 2024

ಇವಿಎಂಗಳ ಬಗ್ಗೆ ತಕರಾರು ಎತ್ತಿದ ಟೆಸ್ಲಾ ಕಂಪನಿಯ ಸಿಇಒ ಎಲಾನ್‌ ಮಸ್ಕ್‌

ವಾಷಿಂಗ್ಟನ್‌/ನವದೆಹಲಿ: ಎಲೆಕ್ಟ್ರಿಕ್‌ ಕಾರು ಉತ್ಪಾದನಾ ದೈತ್ಯ ಟೆಸ್ಲಾ ಕಂಪನಿಯ ಸಿಇಒ ಎಲಾನ್‌ ಮಸ್ಕ್‌ ಅವರು ಇವಿಎಂಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಎಲಾನ್‌ ಮಸ್ಕ್‌ ಅವರು ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

‘ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆ ಯಾಗಿದೆ’ ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.