Thursday, 12th December 2024

ಇಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಇಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.

ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.

ಲೋಕಸಭೆ ಚುನಾವಣೆ ಬೆನ್ನಲೇ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ತೆರಿಗೆ ಹೆಚ್ಚಿಸಿದ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಕೂಡಲೇ ತೈಲ ದರ ಇಳಿಕೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಲೆ ಏರಿಕೆ ಮತ್ತು ತೆರಿಗೆ ಹೆಚ್ಚಳವನ್ನು ರಾಜ್ಯದ ಜನರಿಗೆ ಕೊಡುಗೆಯಾಗಿ ನೀಡಿದೆ. ಆಸ್ತಿ ತೆರಿಗೆ ಹೆಚ್ಚಳ, ಕುಡಿಯುವ ನೀರಿನ ದರ ಏರಿಕೆ, ವಿದ್ಯುತ್ ದರ ಏರಿಕೆ, ವಾಹನಗಳ ತೆರಿಗೆ, ಆಸ್ತಿ ತೆರಿಗೆ ಹೆಚ್ಚಳ ಮಾಡಲಾಗಿದೆ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ದೂರಿದ್ದಾರೆ.