Sunday, 5th January 2025

ಬರ್ತ್​ಡೇ ಸೆಲೆಬ್ರೇಷನ್​ ಮಾಡಿಕೊಳ್ಳಲ್ಲ: ರಕ್ಷಕ್‌ ಬುಲೆಟ್‌

ಬೆಂಗಳೂರು: ನಟ ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಜೈಲು ಸೇರಿರುವ ಕಾರಣ ಬೇಸರಕ್ಕೆ ಒಳಗಾಗಿ ಪರೋಕ್ಷವಾಗಿ ಪೋಸ್ಟ್ ಒಂದನ್ನು ನಟ ಬುಲೆಟ್‌ ಪ್ರಕಾಶ್‌ ಅವರ ಪುತ್ರ ರಕ್ಷಕ್‌ ಬುಲೆಟ್‌ ಶೇರ್‌ ಮಾಡಿದ್ದಾರೆ.

ʻಬಿಗ್‌ಬಾಸ್ʼ ಕನ್ನಡ ಸೀಸನ್‌ 10ರಲ್ಲಿ ನಟ ಬುಲೆಟ್‌ ಪ್ರಕಾಶ್‌ ಅವರ ಪುತ್ರ ರಕ್ಷಕ್‌ ಬುಲೆಟ್‌ ಒಂದು ತಿಂಗಳ ಕಾಲ ಬಿಗ್‌ಬಾಸ್‌ನಲ್ಲಿದ್ದು ಎಲಿಮಿನೇಟ್‌ ಆಗಿಯೂ ಹೊರಬಂದಿದ್ದರು. ಸುದೀಪ್‌ ಬಗ್ಗೆ ಹೇಳಿಕೆಯಿಂದಾಗಿ ಟ್ರೋಲ್‌ ಆಗಿ ಕ್ಷಮೆಯೂ ಕೇಳಿದ್ದರು.

 ‘ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ’ ಎಂದು ಬರ್ತ್​ಡೇ ಸೆಲೆಬ್ರೇಷನ್​ ಮಾಡಿಕೊಳಲ್ಲ ಎಂದು ಹೇಳಿಕೊಂಡಿದ್ದಾರೆ. ಜೂ.21 ಅವರ ಜನ್ಮದಿನ.

ಎಲ್ಲರಿಗೂ ನಮಸ್ಕಾರ ಹಾಗೂ ಫಾದರ್ಸ್ ಡೇ ಶುಭಾಶಯಗಳು. ಇವತ್ತು ಬೆಳಗ್ಗೆಯಿಂದ ನನ್ನ ತಂದೆಯ ನೆನಪು ನನ್ನನ್ನು ತುಂಬಾ ಕಾಡುತ್ತಿದೆ. ಎಲ್ಲರಂತೆ ನನಗೂ ಕೂಡ ನನ್ನ ತಂದೆಯೇ ಮೊದಲ ಹೀರೊ. ಹೀರೊ ಅಷ್ಟೇ ಅಲ್ಲ ಒಳ್ಳೆಯ ಮಾರ್ಗದರ್ಶಕರು ಹಾಗೂ ಸ್ನೇಹಿತರು ಕೂಡ ಆಗಿದ್ದರು. ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ. ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ. ಹೀಗೆ ನಿಮ್ಮ ಪ್ರೀತಿ ವಿಶ್ವಾಸ ಹಾಗೂ ಆಶೀರ್ವಾದ ನನ್ನ ಮೇಲಿರಲಿ ನನ್ನನ್ನು ಬೆಂಬಲಿಸುತ್ತಿರುವ ಎಲ್ಲ ನನ್ನ ಸ್ನೇಹಿತರು, ಪ್ರೀತಿ ಪಾತ್ರರು, ಮಾಧ್ಯಮ ಮಿತ್ರರು, ಟ್ರೋಲ್ ಪೇಜ್‌ಗಳು, ಯೂಟ್ಯೂಬ್‌ರ್ಸ್‌ ಹಾಗೂ ಎಲ್ಲಾ ಸಾಮಾಜಿಕ ಜಾಲತಾಣದ ಸ್ನೇಹಿತರಿಗೆ ಧನ್ಯವಾದಗಳು’ ಎಂದು ಬರೆದಿದ್ದಾರೆ.

Leave a Reply

Your email address will not be published. Required fields are marked *