Thursday, 21st November 2024

ಪರಿಷತ್ ಸ್ಥಾನಕ್ಕೆ ಶೆಟ್ಟರ್ ರಾಜೀನಾಮೆ: ಜುಲೈ 12ರಂದು ಉಪ ಚುನಾವಣೆ

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರಿದ್ದ ಜಗದೀಶ್ ಶೆಟ್ಟರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಆದ್ರೇ ಲೋಕಸಭಾ ಚುನಾವಣೆಯ ವೇಳೆಯಲ್ಲಿ ಆ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಸದರಾಗಿದ್ದರು. ಈ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದು, ಜುಲೈ.12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ನಡೆಸಲಾಗುತ್ತಿದೆ ಎಂದಿದ್ದಾರೆ.

ವಿಧಾನಸಭೆಯಿಂದ ವಿಧಾನ ಪರಿಷತ್ ಸ್ಥಾನಕ್ಕೆ ಈ ಉಪ ಚುನಾವಣೆ ನಡೆಯಲಿದೆ. ಸಂಸದರಾಗುವ ಮೊದರು ಜಗದೀಶ್ ಶೆಟ್ಟರ್ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರು. ಕಾಂಗ್ರೆಸ್ ಪಕ್ಷ ಹಾಗೂ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷ ಸೇರಿ ಕಣಕ್ಕೆ ಇಳಿದು ಗೆಲುವು ಸಾಧಿಸಿದ್ದಾರೆ. ಈಗ ಸಂಸದರು ಕೂಡ ಆಗಿದ್ದಾರೆ.