ಬೆಂಗಳೂರು : ಜೂ.27 ರಂದು ಕೆಂಪೇಗೌಡ ಜಯಂತಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಜೂ.27 ರಂದು ಕೆಂಪೇಗೌಡ ಜಯಂತಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ, ಇದಕ್ಕಾಗಿ ಈಗಿನಿಂದಲೇ ಎಲ್ಲಾ ಸಿದ್ದತೆ ನಡೆಯಲಿದೆ ಎಂದು ಹೇಳಿದರು.
ತೈಲಬೆಲೆ ಏರಿಕೆ ಬಗ್ಗೆ ಮಾತನಾಡಿದ ಡಿಸಿಎಂ ತೈಲಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆ, ಮಾಡಲಿ ಬಿಡಿ ಎಂದು ಹೇಳಿದರು. ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಹೆಚ್ಚಳವಾಗಿದೆ, ಎಲ್ಲದಕ್ಕೂ ಟ್ಯಾಕ್ಸ್ ಹಾಕುತ್ತಿದ್ದಾರೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.
ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಅಗತ್ಯ ಸೂಚನೆ ನೀಡಿದೆ ಎಂದು ಡಿಸಿಎಂ ಡಿಕೆಶಿ ಟ್ವೀಟ್ ಮಾಡಿದ್ದಾರೆ.