Wednesday, 11th December 2024

ಇಂದಿನಿಂದ ಪ್ರಧಾನಿ ಮೋದಿ ಜಮ್ಮು-ಕಾಶ್ಮೀರಾ ಪ್ರವಾಸ ಆರಂಭ

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು-ಕಾಶ್ಮೀರಾ ಪ್ರವಾಸ ಇಂದಿನಿಂದ ಆರಂಭವಾಗಲಿದೆ. ಇತ್ತೀಚೆಗಷ್ಟೇ ನಾಲ್ಕು ಉಗ್ರರ ದಾಳಿಗೆ ಜಮ್ಮು ತತ್ತರಿಸಿದ್ದು ಭಾರೀ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಅಂತಾರಾಷ್ಟ್ರೀಯ ಯೋಗ ದಿನ (ಜೂ.21) ಪ್ರಧಾನಿ ಮೋದಿ ಕಾಶ್ಮೀರದ ದಾಲ್ ಸರೋವರದ ದಡದಲ್ಲಿ ಯೋಗ ಮಾಡಲಿದ್ದಾರೆ. ಜೊತೆಗೆ ಈ ದಿನ ಕೋಟ್ಯಂತರ ರೂಪಾಯಿ ಮೌಲ್ಯದ ಯೋಜನೆಗಳನ್ನು ಉಡುಗೊರೆಯಾಗಿ ನೀಡಲಿದ್ದಾರೆ. ಪ್ರಧಾನಿ ಮೋದಿ ಭದ್ರತೆಗೆ ಬಿಗಿ ಬಂದೋಬಸ್ತ್ ಮಾಡಲಾ ಗಿದೆ.

ಯೋಗ ದಿನ ಶ್ರೀನಗರದ ದಾಲ್ ಸರೋವರದ ದಡದಲ್ಲಿರುವ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (SKICC) ನಲ್ಲಿ ಅವರು ಆರು ಸಾವಿರ ಜನರೊಂದಿಗೆ ಸೂರ್ಯ ನಮಸ್ಕಾರ ಮಾಡಲಿದ್ದಾರೆ. ಗುರುವಾರ ಶ್ರೀನಗರ ತಲುಪಲಿರುವ ಮೋದಿ ಅವರು ನಾಳೆ ಬೆಳಗ್ಗೆ ಯೋಗ ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ.

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಜಮ್ಮು ಕಾಶ್ಮೀರಕ್ಕೆ ಮೊದಲ ಭೇಟಿ ಇದಾಗಿದೆ.

ಪ್ರಧಾನಿಯವರ ಭದ್ರತೆಯ ಹೊಣೆ ಹೊತ್ತಿರುವ ಎಸ್‌ಪಿಜಿಯ ತಂಡ ಜೂನ್ 19 ಬುಧವಾರದಿಂದಲೇ ಶೇರ್-ಎ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್ (ಎಸ್‌ಕೆಐಸಿಸಿ) ಅನ್ನು ನಿಯಂತ್ರಿಸಲಿದೆ ಎಂದು ಭದ್ರತಾ ಸಿದ್ಧತೆಗಳಿಗೆ ಸಂಬಂಧಿಸಿದ ಅಧಿಕಾರಿ ತಿಳಿಸಿದ್ದಾರೆ.