Sunday, 5th January 2025

ಶಿವಮೊಗ್ಗ: ಜೂ.29 ರಂದು ಉದ್ಯೋಗ ಮೇಳ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿ ದ್ದಾರೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *