ಅಯೋಧ್ಯೆ: ಅಯೋಧ್ಯೆಯಲ್ಲಿ ವಿಶ್ವದರ್ಜೆಯ ಭಾರತೀಯ ದೇವಾಲಯ ವಸ್ತುಸಂಗ್ರಹಾಲಯವನ್ನು ನಿರ್ಮಿಸುವ ಪ್ರಸ್ತಾಪಕ್ಕೆ ಯೋಗಿ ಆದಿತ್ಯನಾಥ್ ಸರ್ಕಾರ ಅನುಮೋದನೆ ನೀಡಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ವಸ್ತುಸಂಗ್ರಹಾಲಯದ ಅಭಿವೃದ್ಧಿಯನ್ನು ತ್ವರಿತಗೊಳಿಸಲು ಯುಪಿ ಸರ್ಕಾರ ಸೂಚನೆಗಳನ್ನು ನೀಡಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನಗಳನ್ನು ಅನುಸರಿಸಿ, ಸರಯೂ ನದಿಯ ದಡದಲ್ಲಿ ಸುಮಾರು 50 ಎಕರೆ ಪ್ರದೇಶದಲ್ಲಿ ಹರಡಿ ರುವ ದೇವಾಲಯದ ವಸ್ತುಸಂಗ್ರಹಾಲಯಕ್ಕೆ ಸೂಕ್ತವಾದ ಭೂಮಿಯನ್ನು ಹುಡುಕುವ ಪ್ರಯತ್ನಗಳನ್ನು ತೀವ್ರಗೊಳಿಸಲಾಗಿದೆ. ಇದಕ್ಕಾಗಿ ಪ್ರವಾಸೋ ದ್ಯಮ ಇಲಾಖೆಯು ಭೂಮಿಯನ್ನು 90 ವರ್ಷಗಳವರೆಗೆ ಗುತ್ತಿಗೆಗೆ ನೀಡಲಿದೆ.
ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ (ಸಿಎಸ್ಆರ್ ನಿಧಿ) 650 ಕೋಟಿ ರೂ.ಗಳ ವೆಚ್ಚದಲ್ಲಿ ಅಯೋಧ್ಯೆಯಲ್ಲಿ ವಿಶ್ವದರ್ಜೆಯ ಭಾರತೀಯ ದೇವಾಲಯ ವಸ್ತುಸಂಗ್ರಹಾಲಯ ನಿರ್ಮಿಸಲು ಟಾಟಾ ಸನ್ಸ್ ಕಂಪನಿಯು ಕೇಂದ್ರ ಸರ್ಕಾರದ ಮೂಲಕ ರಾಜ್ಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಠಾಕೂರ್ ಜೈವೀರ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.
ಮ್ಯೂಸಿಯಂ ನಿರ್ಮಾಣಕ್ಕಾಗಿ ಭೂಮಿಯನ್ನು ಪ್ರವಾಸೋದ್ಯಮ ಇಲಾಖೆಯಿಂದ 90 ವರ್ಷಗಳ ಅವಧಿಗೆ 1 ರೂ.ಗಳ ಗುತ್ತಿಗೆಗೆ ನೀಡಲಾಗುವುದು ಎಂದು ಹೇಳಿದರು.