ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನ್ನ ವಿರುದ್ಧ ದಾಖಲಿಸಿರುವ ಪ್ರಕರಣಗಳಲ್ಲಿ ಜಾಮೀನು ಕೋರಿ BRS ನಾಯಕಿ ಕೆ. ಕವಿತಾ ಸಲ್ಲಿಸಿದ್ದ ಅರ್ಜಿಯನ್ನ ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇ 28 ರಂದು ಸಲ್ಲಿಸಲಾದ ಎರಡು ಜಾಮೀನು ಅರ್ಜಿಗಳ ಆದೇಶವನ್ನು ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ ಕಾಯ್ದಿರಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ಸಿಬಿಐನ ಭ್ರಷ್ಟಾಚಾರ ಪ್ರಕರಣ ಮತ್ತು ಜಾರಿ ನಿರ್ದೇಶನಾಲಯದ ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಜಾಮೀನು ಅರ್ಜಿಗಳನ್ನ ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಕವಿತಾ ಮೇ 6 ರಂದು ಪ್ರಶ್ನಿಸಿದ್ದರು.