ನಾಗ್ಪುರ: ಕಳೆದ ನಾಲ್ಕು ತಿಂಗಳ ಹಿಂದೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಹಿಟ್ ಆಯಂಡ್ ರನ್ ಪ್ರಕರಣದಲ್ಲಿ ಮಹಿಳಾ ಚಾಲಕಿ ಪೊಲೀಸರಿಗೆ ಶರಣಾಗಿದ್ದಾರೆ. ಈ ಮೊದಲು ಅವರಿಗೆ ಜಾಮೀನು ಸಿಕ್ಕಿತ್ತು.
ಕುಡಿದ ಅಮಲಿನಲ್ಲಿ ಅವರು ಇಬ್ಬರು ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದ್ದರು. ಪರಿಣಾಮ ಇಬ್ಬರು ಮಾರಣಾಂತಿಕವಾಗಿ ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಮಹಿಳಾ ಚಾಲಕಿ ರಿತಿಕಾ ಅಲಿಯಾಸ್ ರಿತು ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದು, ಸಂಜೆ ಔಪಚಾರಿಕವಾಗಿ ಬಂಧಿಸ ಲಾಯಿತು.
ಕಳೆದ ತಿಂಗಳ ಕೊನೆಯಲ್ಲಿ, ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಮಹಿಳೆಗೆ ಬಂಧನ ಪೂರ್ವ ಜಾಮೀನನ್ನು ನಿರಾಕರಿಸಿತು. ವಿವೇಕವಿರುವವರು ಮದ್ಯಪಾನ ಮಾಡಿ ವಾಹನ ಚಲಾಯಿಸುವುದಿಲ್ಲ ಇದು ಅವರ ದುರ್ನಡತೆಗೆ ಸಾಕ್ಷಿ ಎಂದು ಹೇಳಿದ್ದಾರೆ.
ಫೆಬ್ರವರಿ 25ರಂದು ರಾಮ್ ಜುಲಾ ಸೇತುವೆಯ ಮೇಲೆ ಘಟನೆ ನಡೆದಿದ್ದು, ಮದ್ಯದ ಅಮಲಿನಲ್ಲಿ ತನ್ನ ಕಾರನ್ನು ಅಜಾಗರೂಕತೆಯಿಂದ ಚಲಾಯಿಸಿ ಸ್ಕೂಟರ್ನಲ್ಲಿ ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದಿದ್ದರು. ಮಾಲೂ ವಿರುದ್ಧ ಆರಂಭದಲ್ಲಿ ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನಗಳ ಕಾಯಿದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.