Saturday, 23rd November 2024

ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನ ಗುರುವಾರ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯ ಅವ್ರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಅಂದ್ಹಾಗೆ, ಇದಕ್ಕೂ ಮುನ್ನ ಮಾಜಿ ಉಪ ಪ್ರಧಾನಿಯನ್ನ ಕಳೆದ ವಾರವೂ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸ ಲಾಗಿತ್ತು. ಮೂತ್ರಶಾಸ್ತ್ರ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಡ್ವಾಣಿ ಅವರನ್ನ ಜೂನ್ 27ರಂದು ಮಧ್ಯಾಹ್ನ ಬಿಡುಗಡೆ ಮಾಡಲಾಗಿತ್ತು.