ಬೆಂಗಳೂರು : ರಾಜ್ಯದಲ್ಲಿ ಮುಂದಿನ ನವೆಂಬರ್ ತಿಂಗಳಲ್ಲಿ ಪಿಯು, ಡಿಗ್ರಿ ಕಾಲೇಜು ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಈ ಕುರಿತು ಸುಳಿವು ನೀಡಿರುವ ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎಸ್.ಅಶ್ವತ್ಥನಾರಾಯಣ್, ನಮ್ಮ ಸರ್ಕಾರ ನೀಟ್, ಸಿಇಟಿ ಮತ್ತು ಇತರ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಕಾಲೇಜುಗಳನ್ನು ಸಹ ತೆರೆಯುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದರು.
ಕೇಂದ್ರ ಸರ್ಕಾರದ ಸೂಚನೆಯಂತೆ, ಶೀಘ್ರದಲ್ಲೇ ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸುತ್ತಿದ್ದು, ಆರಂಭಿಸಿದ ಕೂಡಲೇ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾಗಿ ಆಯ್ಕೆಯಾಗಿರುವ ಎಲ್ಲ ಅಭ್ಯರ್ಥಿಗಳಿಗೂ ನೇಮಕಾತಿ ಪತ್ರ ನೀಡಲಾಗುವುದು ಎಂದರು.