Saturday, 23rd November 2024

ನೀಟ್-ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟ

ನವದೆಹಲಿ: ಸುಪ್ರೀಂಕೋರ್ಟ್ ಗಡುವು ಹಿನ್ನೆಲೆಯಲ್ಲಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ ಟಿಎ) ಶನಿವಾರ ನೀಟ್-ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.

2024ರ ನೀಟ್-ಯುಜಿ ಪರೀಕ್ಷಾ ಕೇಂದ್ರಗಳ ವಿಭಾಗದಲ್ಲಿ ಫಲಿತಾಂಶ ಪ್ರಕಟಿಸಿದ್ದು, ವೆಬ್ ಸೈಟ್ ನಲ್ಲಿ ಕೂಡ ಫಲಿತಾಂಶ ವಿವರವನ್ನು ಪರೀಕ್ಷಾ ಕೇಂದ್ರಗಳ ವಿಭಾಗದಲ್ಲಿ ಪ್ರಕಟಿಸಿದೆ.

ಪರೀಕ್ಷೆ ಬರೆದವರು exams.nta.ac.in/NEET/ ಮತ್ತು neet.ntaonline.in. ವೆಬ್ ಸೈಟ್ ಗಳಲ್ಲಿ ಪರೀಕ್ಷೆಯ ಫಲಿತಾಂಶವನ್ನು ನೋಡಬಹುದಾಗಿದೆ.

ಜುಲೈ 18ರಂದು ಸುಪ್ರೀಂಕೋರ್ಟ್ ನೀಟ್-ಯುಜಿ ಪರೀಕ್ಷೆಯ ಫಲಿತಾಂಶವನ್ನು ಜು.20 ಮಧ್ಯಾಹ್ನ 12 ಗಂಟೆಯೊಳಗೆ ಪ್ರಕಟಿಸುವಂತೆ ಗಡುವು ನೀಡಿತ್ತು. ಈ ಹಿನ್ನೆಲೆಯಲ್ಲಿ ಎನ್ ಟಿಎ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ರಾಜ್ಯ, ನಗರ, ಪರೀಕ್ಷಾ ಕೇಂದ್ರದಂತೆ ವಿಭಾಗದಲ್ಲಿ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು.

2024ನೇ ಸಾಲಿನ ನೀಟ್-ಯಜಿ ಪರೀಕ್ಷೆ ಮೇ 5ರಂದು ನಡೆದಿತ್ತು. 23.23 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 571 ನಗರ 14 ವಿದೇಶಗಳಲ್ಲಿ ಸೇರಿದಂತೆ 4,740 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ಅಕ್ರಮ ನಡೆದ ಕೇಂದ್ರ ಸೇರಿದಂತೆ 1563 ಅಭ್ಯರ್ಥಿಗಳು ಮರು ಪರೀಕ್ಷೆ ಬರೆದಿದ್ದರು.