ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಜನರು ಮೂರನೇ ಬಾರಿಗೆ ಪ್ರಧಾನಿ ಮೋದಿ ಸರ್ಕಾರಕ್ಕೆ ಆಶಿರ್ವಾದ ಮಾಡಿರುವುದಕ್ಕೆ ಅವರಿಗೆ ಆಭಾರಿಯಾಗಿದ್ದೇನೆ ಎಂದರು.
ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಭಾರತದ ಆರ್ಥಿಕತೆ ವೃದ್ಧಿಯಾಗಿದೆ.
ಹಣದುಬ್ಬರ ನಿಯಂತ್ರಣದಲ್ಲಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 5 ವರ್ಷ ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದರು.
ಶಿಕ್ಷಣ, ಉದ್ಯೋಗ, ಕೌಶಲಾಭಿವೃದ್ಧಿಗಾಗಿ1.48 ಲಕ್ಷ ಕೋಟಿ ಅನುದಾನ ಮೀಸಲಿಟ್ಟಿರುವುದಾಗಿ ತಿಳಿಸಿದರು.