ನವದೆಹಲಿ: ತರುಣ್ ವಿಭಾಗದಲ್ಲಿ ಸಾಲ ಪಡೆದು ಯಶಸ್ವಿಯಾಗಿ ಮರುಪಾವತಿ ಮಾಡಿದವರಿಗೆ ಮುದ್ರಾ ಸಾಲದ ಮಿತಿಯನ್ನು ಪ್ರಸ್ತುತ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆ ಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಿದರು.
2024-25ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ 1.52 ಲಕ್ಷ ಕೋಟಿ ರೂ. ಮೀಸಲು ಇಡಲಾಗುವುದು ಎಂದು ಹೇಳಿದ್ದಾರೆ.
ಬಜೆಟ್ನಲ್ಲಿ ಉಲ್ಲೇಖಿಸಿದಂತೆ, ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರು ಎಂಬ ನಾಲ್ಕು ವಿಭಿನ್ನ ವಲಯಗಳ ಮೇಲೆ ಗಮನ ಹರಿಸಬೇಕಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರೈತರಿಗೆ, ನಾವು ಎಲ್ಲಾ ಪ್ರಮುಖ ಬೆಳೆಗಳಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಗಳನ್ನು ಘೋಷಿಸಿದ್ದೇವೆ, ವೆಚ್ಚಕ್ಕಿಂತ ಕನಿಷ್ಠ 50% ಲಾಭಾಂಶದ ಭರವಸೆಯನ್ನು ಈಡೇರಿಸಿದ್ದೇವೆ. ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 5 ವರ್ಷಗಳವರೆಗೆ ವಿಸ್ತರಿಸಲಾಗಿದ್ದು, 80 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವಾಗಿದೆ ಎಂದರು.
ಉದ್ಯೋಗ ಮತ್ತು ಕೌಶಲ್ಯಕ್ಕೆ ಅನುಕೂಲವಾಗುವಂತೆ ಐದು ಯೋಜನೆಗಳ ಪಿಎಂ ಪ್ಯಾಕೇಜ್ ಘೋಷಿಸಿದ್ದು, ಸಚಿವರು ಮೋದಿ 3.0 ಸರ್ಕಾರವು ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 2 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ.