Friday, 22nd November 2024

ಸಾಲಭಾದೆ ತಾಳಲಾರದೇ ಮೂವರು ಆತ್ಮಹತ್ಯೆ

ಹಾಸನ: ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನರಾಯಪಟ್ಟಣದ ಕೆರೆಬೀದಿಯಲ್ಲಿ ನಡೆದಿದೆ. ಮುದ್ಲಾಪುರ ಬಳಿಯ ನಾಲೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಹೇಮಾವತಿ ಕಾಲುವೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಪತಿ ಶ್ರೀನಿವಾಸ್ (43) ಕಾರು ಚಾಲಕನಾಗಿದ್ದ, ಪತ್ನಿ ಶ್ವೇತಾ (36) ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಳು, ಪುತ್ರಿ ನಾಗಶ್ರೀ (13) ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನದಿಂದ ಈ ಮೂವರು ಕಾಣೆಯಾಗಿದ್ದರು. ಈ ಸಂಬಂಧ ಸಂಬಂಧಿಕರು ಠಾಣೆಗೆ ದೂರು ನೀಡಿದ್ದರು.

ನುಗ್ಗೇಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವವನ್ನು ಹೊರಕ್ಕೆ ತೆಗೆಯಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.