ಹಾವೇರಿ : ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಾರೋಗೋಪ್ಪ ಎಂಬಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ NWKRTC ಬಸ್ ಪಲ್ಟಿಯಾಗಿ ಪ್ರಯಾಣಿಸುತ್ತಿದ್ದ ಸುಮಾರು 13ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ನಡೆದಿದೆ.
ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಪಲ್ಟಿಯಾಗಿದ್ದು, 13 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ.
ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಾರೋಗಪ್ಪ ಬಳಿ ಈ ಒಂದು ಭೀಕರ ಅಪಘಾತ ನಡೆದಿದ್ದು, ಶಿಕಾರಿಪುರದಿಂದ ರಾಣಿಬೆನ್ನೂರಿಗೆ ಬರುತ್ತಿದ್ದ ಏನ್ ಡಬ್ಲ್ಯೂ ಕೆ ಆರ್ ಟಿ ಸಿ ಬಸ್ ಪಲ್ಟಿಯಾಗಿದೆ.
ಗಾಯಗೊಂಡವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅಪಘಾತ ಸ್ಥಳಕ್ಕೆ ಹಲಗೇರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.