ತುಮಕೂರು: ಕರ್ನಾಟಕ ಕಾಡುಗೊಲ್ಲರ ಪರಿಷತ್ ಉದ್ಘಾಟನೆ ಹಾಗೂ ಅತಿ ಹೆಚ್ಚು ಅಂಕ ಪಡೆದ ಹತ್ತನೇ ತರಗತಿ , ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಗರದ ಬಾಲಭವನದಲ್ಲಿ ಆ.25 ರಂದು ಬೆಳಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ.
ಸಮಾರಂಭದ ಘನ ಉಪಸ್ಥಿತಿಯನ್ನು ಚಿಕ್ಕಣ್ಣ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಪಾಪಣ್ಣ ವಹಿಸುವರು. ಶಾಸಕ ಜ್ಯೋತಿ ಗಣೇಶ್ ಉದ್ಘಾಟನೆ ನೆರವೇರಿಸಲಿದ್ದು, ಕರ್ನಾಟಕ ಕಾಡುಗೊಲ್ಲರ ಪರಿಷತ್ ರಾಜ್ಯಾಧ್ಯಕ್ಷ ಅರುಣ್ ಕೃಷ್ಣಯ್ಯ ಅಧ್ಯಕ್ಷತೆ ವಹಿಸುವರು.
ಸುಮಾರು 150ಕ್ಕೂ ಹೆಚ್ಚು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ಸಮುದಾಯದ ಮುಖಂಡರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಗುವುದು. ನಿವೃತ್ತ ತಹಸೀಲ್ದಾರ್ ಸಣ್ಣಮುದ್ದಯ್ಯ, ಡಾ. ಶಿವಕುಮಾರ ಸ್ವಾಮಿ, ಡಾ. ಗುರುಲಿಂಗಯ್ಯ, ಕರಿಯಪ್ಪ ಸೇರಿದಂತೆ ಸಮುದಾಯದ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.