ತುಮಕೂರು: ತುಮಕೂರು ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಸಮಾವೇಶ, ಅಭಿನಂದನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಆ. 25 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಪಾದಪೂಜೆಯೊಂದಿಗೆ ನಡೆಯಲಿರುವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಬೆಳ್ಳಾವಿ ಕಾರದ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ ವಹಿಸುವರು. ಉದ್ಘಾಟನೆಯನ್ನು ಅ.ಭಾ.ವೀ.ಲಿಂ.ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಮಹದೇವ ಬಿದರಿ ನೆರವೇರಿಸುವರು.
ಇದೇ ಸಂದರ್ಭದಲ್ಲಿ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರನ್ನು ಸನ್ಮಾನಿಸಲಾಗುವುದು.
ಮುಖ್ಯ ಅತಿಥಿಗಳಾಗಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್, ಅ.ಭಾ.ವೀ.ಲಿಂ. ಜಿಲ್ಲಾಧ್ಯಕ್ಷ ಡಾ. ಪರಮೇಶ್, ಕಂದಾಯ ಸಚಿವರ ಆಪ್ತ ಕಾರ್ಯದರ್ಶಿ ಡಾ.ರವಿ ತಿರ್ಲಾಪುರ, ಯೋಜನಾ ಸಚಿವರ ಆಪ್ತ ಕಾರ್ಯದರ್ಶಿ ಸೋಮಶೇಖರ್, ಸಾಗರನಹಳ್ಳಿ ನಟರಾಜು, ಕೆ.ಎಸ್.ಸಿದ್ದಲಿಂಗಪ್ಪ, ಬಿ.ವಿ.ಪಾಲನೇತ್ರ, ಸೋಮಶೇಖರಯ್ಯ, ಬಿ. ನಟರಾಜು ಭಾಗವಹಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ವೀರಶೈವ ಲಿಂಗಾಯತ ನೌಕರರ ಸಂಘದ ಅಧ್ಯಕ್ಷರಾದ ಉಮೇಶ್ ವಹಿಸುವರು. ನಿಜಲಿಂಗಪ್ಪ ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ನೌಕರ ಬಂಧುಗಳಿಗೆ ಶ್ರೀ ಸಿದ್ದಗಂಗಾ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.