ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರಿ ಅಗ್ನಿ ಅವಗಢ ಸಂಭವಿಸಿದೆ.
ಗುರುವಾರ ರಾತ್ರಿ ಈ ಅವಗಢ ನಡೆದಿದ್ದು, ಮಾಲ್ ನಲ್ಲಿ 200-300 ಮಂದಿ ಇದ್ದರು ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ 20 ಅಗ್ನಿ ಶಾಮಕ ದಳ ವಾಹನಗಳು, ಏಳು ಜಟ್ಟಿಗಳ ಸಹಾಯದಿಂದ ಕಾರ್ಯಾಚರಣೆ ಮಾಡಲಾಗಿದೆ.
ಘಟನೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ಸಿಬ್ಬಂದಿಯೋರ್ವರಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲಾ 200-300 ಜನರನ್ನು ಅಗ್ನಿಶಾಮಕ ದಳದ ಅಧಿಕಾರಿಗಳು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆದರೆ ಇನ್ನೂ ಬೆಂಕಿ ನಿಯಂತ್ರಣ ದಲ್ಲಿರಲಿಲ್ಲ ಎಂದು ವರದಿ ತಿಳಿಸಿದೆ.
ಅಗ್ನಿಶಾಮಕ ದಳದ ಅಧಿಕಾರಿಗಳ ಪ್ರಕಾರ, ಬೆಂಕಿಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ನಗರದಲ್ಲಿ ಗುರುವಾರ ಸಂಭವಿಸಿದ ಎರಡನೇ ಅಗ್ನಿ ಅವಗಢ ಎಂದು ವರದಿಯಾಗಿದೆ. ಕುರ್ಲಾ ವೆಸ್ಟ್ನ ಗಾರ್ಮೆಂಟ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿ ಕೊಂಡಿತ್ತು.