Sunday, 15th December 2024

ಮುಂದಿನ ಫೆಬ್ರವರಿಯಲ್ಲಿ ಮರಳಲಿದ್ದಾರೆ ಗಗನಯಾತ್ರಿ ಸುನೀತಾ ವಿಲಿಯಮ್ಸ್‌

ವಾಷಿಂಗ್ಟನ್: ಭಾರತ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಮುಂದಿನ ಫೆಬ್ರವರಿಯಲ್ಲಿ ಬುಚ್ ಮತ್ತು ಸುನಿತಾ ಕ್ರ್ಯೂ -9 ರೊಂದಿಗೆ ಹಿಂತಿರುಗುತ್ತಾರೆ ಮತ್ತು ಸ್ಟಾರ್ಲೈನರ್ ಸಿಬ್ಬಂದಿ ಯಿಲ್ಲದೆ ಹಿಂತಿರುಗುತ್ತಾರೆ ಎಂದು ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಹೇಳಿದ್ದಾರೆ.

ಬೋಯಿಂಗ್ ಬಾಹ್ಯಾಕಾಶ ನೌಕೆಯ ಥ್ರಸ್ಟರ್ ಅಸಮರ್ಪಕ ಕಾರ್ಯಗಳಿಂದ ಸುನಿತಾ ವಿಲಿಯಮ್ಸ್‌ ಮತ್ತು ಬುಚ್‌ ಹಿಂತಿರುಗುವುದು ವಿಳಂಬವಾಗಿದೆ ಎಂದು ಹೇಳಿದರು.

“ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿರುವ ಸುನೀತಾ ವಿಲಿಯಮ್ಸ್‌ ಅವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ. ಇವರು ಬೋಯಿಂಗ್‌ ಸ್ಟಾರ್‌ಲೈನರ್‌ ಬದಲು ಸ್ಪೇಸ್‌ಎಕ್ಸ್‌ನ ಕ್ರ್ಯೂ ಡ್ರ್ಯಾಗನ್‌ನಲ್ಲಿ ವಾಪಸಾಗಲಿದ್ದಾರೆ.

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.